August 4, 2026
Startv News | Hubli | Kannada News
ಅಪರಾಧ ರಾಷ್ಟ್ರೀಯ ವಿಶೇಷ ವರದಿ ಸುದ್ದಿಗಳು

ಖ್ಯಾತ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ.?

ನಾನಾ ಭಾಷೆಗಳಲ್ಲಿ ನಟಿಸಿರುವ ಬಾಲಿವುಡ್ ನಟಿ ಜಯಪ್ರದಾ (Jayaprada) ಅವರಿಗೆ ಚೆನ್ನೈನ (Chennai) ಎಗ್ಮೋರ್ ನ್ಯಾಯಾಲಯವು ಆರು ತಿಂಗಳ ಕಾಲ ಜೈಲು ಶಿಕ್ಷೆ ಪ್ರಕಟಿಸಿದೆ. ನಟಿಯ ವಿರುದ್ಧ ಸರಕಾರದ ಲೇಬರ್ ಇನ್ಶುರೆನ್ಸ್ ಕಾರ್ಪೋರೇಷನ್ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು.

ಈ ಪ್ರಕರಣದಲ್ಲಿ ಜಯಪ್ರದಾಗೆ ಸೋಲಾಗಿದೆ.

ಸಿನಿಮಾ ರಂಗದಲ್ಲಿ ಖ್ಯಾತ ನಟಿಯಾಗಿ ಗುರುತಿಸಿಕೊಂಡಿರುವ ಜಯಪ್ರದಾ, ಸಿನಿಮಾ ಪ್ರದರ್ಶಕಿಯೂ ಹೌದು. ಚೆನ್ನೈನಲ್ಲೇ ಇವರ ಹೆಸರಿನಲ್ಲಿ ಎರಡು ಚಿತ್ರಮಂದಿರಗಳಿವೆ. ಈ ಎರಡು ಚಿತ್ರ ಮಂದಿರಗಳಲ್ಲಿ ಅನೇಕ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಕಾರ್ಮಿಕರ ಇ.ಎಸ್.ಐ ಹಣವನ್ನು ಕಡಿತ ಮಾಡಿಕೊಂಡು ಕಾರ್ಮಿಕ ಇಲಾಖೆಗೆ ಅದನ್ನು ಪಾವತಿಸಿಲ್ಲ ಎನ್ನುವ ಕಾರಣಕ್ಕಾಗಿ ದೂರು ನೀಡಲಾಗಿತ್ತು.

ಈಗಾಗಲೇ ಅವರು ಮಾಲೀಕರಾಗಿರುವ ಆ ಎರಡೂ ಚಿತ್ರಮಂದಿರಗಳ ಮೇಲೆ ಕೇಸ್ ದಾಖಲಾಗಿದೆ. ಆಸ್ತಿ ತೆರಿಗೆಯನ್ನು ಕಟ್ಟದೇ ಇರುವ ಕಾರಣಕ್ಕಾಗಿ ಜಪ್ತಿ ಕೂಡ ಮಾಡಲಾಗಿದೆ. ಆದರೂ ಇ.ಎಸ್.ಐ ಕಟ್ ಮಾಡಿಯೂ ಕಾರ್ಮಿಕ ಇಲಾಖೆಗೆ ಅವರು ಪಾವತಿ ಮಾಡಿರಲಿಲ್ಲ ಎನ್ನುವುದು ಅಧಿಕಾರಿಗಳ ಆರೋಪವಾಗಿತ್ತು.

Share

Related posts

ಹುಬ್ಬಳ್ಳಿ: ಸಾರ್ವಜನಿಕರ ಒಂದು ಕರೆಗೆ ಸ್ಪಂದಿಸಿ ಸ್ವಚ್ಛಗೊಳಿಸಿದ ಮಹಾನಗರ ಪಾಲಿಕೆಯ ಸದಸ್ಯ ಸಿದ್ದು ಮುಗಲಿ ಶೆಟ್ಟರ್.!

admin

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸ ಮುಸ್ಲಿಮರಿಂದ ಗೋ ರಕ್ಷಣೆಯ ಆಂದೋಲನ.! ರಾಷ್ಟ್ರೀಯ ಪಶು ವನ್ನಾಗಿ ಜಾರಿ ಮಾಡಿ ಎಂದು ಬೇಡಿಕೆ.!

admin

KSET Exam: ಕೆ ಸೆಟ್​ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

admin

Leave a Comment