August 4, 2026
Startv News | Hubli | Kannada News
ಕರ್ನಾಟಕ ಸುದ್ದಿ ವಿಶೇಷ ವರದಿ ಸುದ್ದಿಗಳು

ಬೆಂಗಳೂರು ಸೇರಿದಂತೆ 14 ಕಡೆಯಲ್ಲಿ ಸರ್ವೇ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ!

ಬೆಂಗಳೂರಿನ ಕೆ ಆರ್ ಪುರಂ ತಾಲೂಕು ಕಚೇರಿಯ ಸರ್ವೇ ಸೂಪರ್ ವೈಸರ್ ಕೆ.ಟಿ ಶ್ರೀನಿವಾಸ್ ಮನೆ, ಕಚೇರಿ, ಸಂಬಂಧಿಕರ ಮೇಲೆ 14 ಕಡೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಕೆ ಆರ್ ಪುರಂ ತಾಲೂಕು ಕಚೇರಿಯಲ್ಲಿ ಸರ್ವೇ ಸೂಪರ್ ವೈಸರ್ ಆಗಿರುವಂತ ಕೆ.ಟಿ ಶ್ರೀನಿವಾಸ್ ಅವರು ಐದಕ್ಕೂ ಹೆಚ್ಚು ಅಬಕಾರಿ ಲೈಸೆನ್ಸ್ ಹೊಂದಿದ್ದಾರೆ ಎಂಬುದಾಗಿ ಆರೋಪ ಕೇಳಿ ಬಂದಿತ್ತು.

ಈ ಹಿನ್ನಲೆಯಲ್ಲಿ ಬೆಂಗಳೂರಿನ ಅವರ ಕಚೇರಿ, ಆಂಧ್ರಹಳ್ಳಿ ನಿವಾಸ, ಹೆಣ್ಣೂರಿನಲ್ಲಿನ ಸಹೋದರಿ ನಿವಾಸ, ಪತ್ನಿ ಹೆಸರಿನ ಹೋಟೆಲ್ ಬೋರ್ಡಿಂಗ್ ಹೌಸ್, ಶ್ರೀನಿವಾಸ್ ಸಹೋದರನ ಮನೆಯಲ್ಲೂ ಪರಿಶೀಲನೆ ನಡೆಸುತ್ತಿದ್ದಾರೆ.

ನಿಗದಿಗಿಂತ ಹೆಚ್ಚು ಆಸ್ತಿ ಗಳಿಸಿರೋ ಆರೋಪದ ಹಿನ್ನಲೆಯಲ್ಲಿ ಸರ್ವೆ ಸೂಪರ್ ವೈಸರ್ ಕೆ.ಟಿ ಶ್ರೀನಿವಾಸ್ ನಿವಾಸ, ಕಚೇರಿ, ಸಂಬಂಧಿಕರ ಮೇಲೆ ಬೆಂಗಳೂರು, ತುಮಕೂರು ಸೇರಿದಂತೆ 14 ಕಡೆಯಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಇದೀಗ ದಾಳಿ ನಡೆಸಿ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Share

Related posts

ಹುಬ್ಬಳ್ಳಿಯ ಟೌನ್ ಪೊಲೀಸ್ ಠಾಣೆ ಎದುರಿಗೆ ಬಿಜೆಪಿ ನಾಯಕರು ಹಾಗೂ ಹಿಂದೂ ಕಾರ್ಯಕರ್ತರ ಬೃಹತ್ ಪ್ರತಿಭಟನೆ.! ಆರ್.ಅಶೋಕ್ & ಮಹೇಶ್ ಟೆಂಗಿನ! 👇ವಿಡಿಯೋ ನೋಡಿ.

admin

ಹಳೆ ಹುಬ್ಬಳ್ಳಿಯ ನಿವಾಸಿ ನೇಣು ಬಿಗಿದು ಆತ್ಮಹತ್ಯೆ. ಯಾಕೆ ಈ ಅನಾಹುತ?

admin

ಚೆನ್ನಾಗಿ ಓದಿ ಎಂದು ಹೆತ್ತವರು ಬುದ್ಧಿ ಹೇಳಿದ್ದಕ್ಕೆ ಪ್ರಾಣವನ್ನೇ ಕಳೆದುಕೊಂಡ ಇಬ್ಬರು ವಿದ್ಯಾರ್ಥಿನಿಯರು!

admin

Leave a Comment