ಸಿದ್ದಿಪೇಟೆಯಲ್ಲಿ ಈ ಘಟನೆ ನಡೆದಿದ್ದು, ತಾಯಿಯ ಕತ್ತು ಸೀಳಿ ಕೊಂದಿದ್ದೂ ಅಲ್ಲದೇ ಆಕೆಯ ಕೈ ಕಾಲುಗಳನ್ನು ಕತ್ತರಿಸಿ ದರೋಡೆ ಕತೆ ಕಟ್ಟಿದ್ದಾನೆ.
ಮದುವೆ ಮಾಡಿಕೊಳ್ಳಲು ಹುಡುಗಿಯನ್ನು ಹುಡುಕುತ್ತಿಲ್ಲ ಎಂದು ಪಾಪಿ ಮಗ ಹೆತ್ತತಾಯಿಯನ್ನೇ ಕೊಂದ ಆಘಾತಕಾರಿ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಮಹಿಳೆ ನೀಡಿದ ದೂರಿನಲ್ಲಿ ಆರೋಪಿಗಳು ಇಟ್ಟಿಗೆಯಿಂದ ಹಲ್ಲೆ ನಡೆಸಿ ತಾಯಿಯನ್ನು ಕೊಲೆಗೈದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಈ ಬಗ್ಗೆ ತನಿಖೆಯ ಸಂದರ್ಭದಲ್ಲಿ ಆರೋಪಿಗಳು ಕೃತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದರೆ ಸೋದರಿ ನೀಡಿದ ಸುಳಿವಿನ ಮೇರೆಗೆ ಆರೋಪಿ ಮಗನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಅಲ್ಲದೇ ಆರೋಪಿಗಳು ಈ ಹಿಂದೆ ಯಾವುದಾದರೂ ಕೃತ್ಯಗಳಲ್ಲಿ ಭಾಗಿಯಾಗಿರುವುದರ ಬಗ್ಗೆ ಸಹ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
