Startv News | Hubli | Kannada News
ಕರ್ನಾಟಕ ಸುದ್ದಿ ವಿಶೇಷ ವರದಿ ಶಿಕ್ಷಣ ಸುದ್ದಿಗಳು

KSET Exam: ಕೆ ಸೆಟ್​ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭ

ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರ್ವಹಣೆ ಮಾಡುವ ಇಚ್ಛೆ ಹೊಂದಿರುವ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ- ಸೆಟ್​​) ಅರ್ಜಿ ಆಹ್ವಾನಿಸಲಾಗಿದೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರ್ವಹಣೆಗೆ ಈ ಪರೀಕ್ಷೆ ಅರ್ಹತೆ ಕಡ್ಡಾಯವಾಗಿರುವ ಹಿನ್ನೆಲೆ ಈ ಪರೀಕ್ಷೆ ಹೆಚ್ಚು ಮಹತ್ವಪೂರ್ಣವಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರ್ವಹಣೆ ಮಾಡುವ ಇಚ್ಛೆ ಹೊಂದಿರುವ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಈ ಪರೀಕ್ಷೆಗೆ ಎದುರಾಗಬಹುದು. ಇಂದಿನಿಂದ ಈ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಮಾಡಲಾಗಿದ್ದು, ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಅಧಿಸೂಚನೆ

ಹುದ್ದೆ ವಿವರ: 2023ನೇ ಸಾಲಿನ ಸಹಾಯಕ ಪ್ರಾಧ್ಯಾಪಕ ಹುದ್ದೆ ಅರ್ಹತೆಗೆ ನಡೆಸುವ ಪರೀಕ್ಷೆ ಇದಾಗಿದೆ.

ವಿದ್ಯಾರ್ಹತೆ: ಅಧಿಕೃತ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರೈಸಿದ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ. ಒಟ್ಟು 41 ವಿಷಯದಲ್ಲಿ ಅರ್ಹರಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಯಾವುದೇ ವಯೋಮಿತಿ ಇಲ್ಲ.

ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆ ನಿರ್ವಹಣೆಗೆ ಕೆ ಸೆಟ್​ ಅರ್ಹತೆ ಪಡೆಯುವುದು ಅವಶ್ಯವಾಗಿದ್ದು, ಅಭ್ಯರ್ಥಿಗಳು ಪರೀಕ್ಷೆಗೆ ಆನ್​ಲೈನ್​ ಮೂಲಕ ನೋಂದಣಿ​ ಮಾಡಿಕೊಳ್ಳಬಹುದು. ಯುಜಿಸಿ ನಿಯಮದ ಅಡಿಯಲ್ಲಿ ಈ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಹಾಯಕ ಪ್ರಾಧ್ಯಾಪಕ ಹುದ್ದೆ ನೇಮಕಾತಿ ಸುಲಭವಾಗಲಿದೆ. ಇಲ್ಲಿಯವರೆಗೆ ಈ ಪರೀಕ್ಷೆಯನ್ನು ಮೈಸೂರು ವಿಶ್ವವಿದ್ಯಾಲಯದಿಂದ ನಡೆಸಲಾಗುತ್ತಿತ್ತು. ಆದರೆ, ಇದೇ ಮೊದಲ ಬಾರಿಗೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರಿದಿಂದ ನಡೆಸಲಾಗುತ್ತಿದೆ.

ಪರೀಕ್ಷೆ: ಈ ಅರ್ಹತಾ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರಲಿದೆ. ಈ ಪರೀಕ್ಷೆಯಲ್ಲಿ ಕನಿಷ್ಠ 40 ಅಂಕಗಳನ್ನು ಗಳಿಸುವ ಮೂಲಕ ಅರ್ಹತೆ ಸಂಪಾದಿಸಬಹುದು. ರಾಜ್ಯದ ಪ್ರಮುಖ 11 ಕೇಂದ್ರದಲ್ಲಿ ಈ ಪರೀಕ್ಷೆ ನಡೆಯಲಿದೆ.

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ 1150, ಪ್ರವರ್ಗ 2 ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 960 ಮತ್ತು ಪರಿಶಿಷ್ಟ ಜಾತಿ, ಪಂಗಡ, ವಿಕಲಚೇತನ ಅಭ್ಯರ್ಥಿಗಳಿಗೆ 650 ರೂ. ನಿಗದಿಸಲಾಗಿದೆ.

ಅರ್ಜಿ ಸಲ್ಲಿಕೆ: ಈ ಅರ್ಹತಾ ಪರೀಕ್ಷೆಗೆ ಇಂದಿನಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆ. 30 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಅಕ್ಟೋಬರ್​ 3 ಆಗಿದೆ. ಈ ಪರೀಕ್ಷೆಗಳನ್ನು ಪ್ರಾಧಿಕಾರ ನವೆಂಬರ್​ 5ರಂದು ನಡೆಸುವ ಸಾಧ್ಯತೆ ಇದೆ ಎಂಬ ತಾತ್ಕಾಲಿಕ ದಿನಾಂಕವನ್ನು ಘೋಷಿಸಲಾಗಿದೆ.

ಈ ಅರ್ಹತಾ ಪರೀಕ್ಷೆ ಕುರಿತು ಹೆಚ್ಚಿನ ವಿವರ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು cetonline.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ

Share

Related posts

ಎರಡು ಕೋಮಿನ ಮಧ್ಯೆ ವಿಷ ಬಿತ್ತುವ ಪ್ರಮೋದ್ ಮುತಾಲಿಕ್ ಗೇ ಗಡಿಪಾರು ಮಾಡಬೇಕೆಂದು ಮುಸ್ಲಿಂ ಸಮಾಜದಿಂದ ಆಗ್ರಹ.! ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಅವರಿಗೆ ಭೇಟಿ.!

admin

ಹುಬ್ಬಳ್ಳಿ: ಉತ್ತರ ಕರ್ನಾಟಕದ ಅತಿ ದೊಡ್ಡ ಸ್ಪೇಸ್ ಕ್ಸ್ ಫಿಟ್ನೆಸ್ ಉದ್ಘಾಟನಾ ಸಮಾರಂಭ ಸಂತೋಷ ಲಾಡ್ ಅವರಿಂದ. Space X Fitness

admin

ಯೂನಿಯನ್ ಬ್ಯಾಂಕ್ ಮತ್ತು ಸ್ವರ್ಣ ಬಳಗದಿಂದ ಕಛೇರಿಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ.

admin

Leave a Comment