ಧಾರವಾಡ: ಮರಾಠ ಕಾಲೋನಿಯ ಮುಖ್ಯರಸ್ತೆಯಲ್ಲಿ ಘಟನೆ ನಡೆದಿದೆ. ಫಕೀರಪ್ಪ ಕೊಲೆಯಾದ ವ್ಯಕ್ತಿಯಾಗಿದ್ದು ಧಾರವಾಡದ ಹೆಬ್ಬಳ್ಳಿ ಗ್ರಾಮದ ನಿವಾಸಿಯಾಗಿದ್ದು ಆಸ್ತಿ ವಿಚಾರಕ್ಕೆ ಅವರ ಅಣ್ಣ ತಮ್ಮಂದಿರರು ಹತ್ಯೆಯನ್ನು ಮಾಡಿದ್ದಾರೆ ಎನ್ನಲಾಗಿದೆ. ರಸ್ತೆಯಲ್ಲಿ ಕಲ್ಲು ಮತ್ತು ಮಾರಕಾಸ್ತ್ರಗಳಿಂದ ಹಲ್ಲೆಯನ್ನು ಮಾಡಿ ಭೀಕರವಾಗಿ ಕೊಲೆಯನ್ನು ಮಾಡಲಾಗಿದ್ದು, ವಿಚಾರವನ್ನು ತಿಳಿದ ಧಾರವಾಡದ ಉಪನಗರ ಪೊಲೀಸರು ಸ್ಥಳಕ್ಕೇ ಆಗಮಿಸಿ ಪರಿಶೀಲನೆ ಮಾಡಿ ಈ ಕುರಿತಂತೆ ಪ್ರಕರಣವನ್ನು ದಾಖಲು ಮಾಡಿಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ. ಪೊಲೀಸರು ಆರೋಪಿಗಳ ಬಂಧನಕ್ಕೆ ಜಾಲವನ್ನು ಬೀಸಿದ್ದು ಕೊಲೆಗೆ ನಿಖರವಾದ ಕಾರಣವನ್ನು ಹುಡುಕುತ್ತಿದ್ದಾರೆ.
