August 4, 2026
Startv News | Hubli | Kannada News
ಕರ್ನಾಟಕ ಸುದ್ದಿ ರಾಜಕೀಯ ವಿಶೇಷ ವರದಿ ಸ್ಥಳೀಯ ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ: ಸಿ ಎಂ ಸಿದ್ದರಾಮಯ್ಯ ಅವರ ಅದ್ಭುತ ಮಾತುಗಳು.! ಅಲ್ಪ ಸಂಖ್ಯಾತರಿಗೆ ಅನುದಾನ ಕೊಟ್ಟೆ ಕೊಡ್ತೀನಿ. ಹಜರತ್ ಭಾಷಾ ಖಾದ್ರಿ ಆಶ್ತಾನಾ ದಲ್ಲಿ ಮುಸ್ಲಿಂ ಕಾನ್ಫರೆನ್ಸ್!

ಬಹುತ್ವವೇ ಭಾರತದ ಶಕ್ತಿ-ಸಂವಿಧಾನವೇ ಬಹುತ್ವದ ಶಕ್ತಿ

ಅತ್ಯುನ್ನತ ಮಾನವೀಯ ಮೌಲ್ಯ ಸಾರಿದ ಸೂಫಿ ಸಂತ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಅಭಿವೃದ್ಧಿಗೆ ಅಗತ್ಯ ಅನುದಾನ: ಸಿಎಂ ಸಿದ್ದರಾಮಯ್ಯ ಭರವಸೆ

ಹುಬ್ಬಳ್ಳಿ ಡಿ 4: ಬಹುತ್ವವೇ ಭಾರತದ ಶಕ್ತಿ-ಸಂವಿಧಾನವೇ ಬಹುತ್ವದ ಶಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ ಮಕ್ಕಳ ಸಮಾವೇಷ) ಸಮಾವೇಷವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾಜದಲ್ಲಿ ವೈವಿದ್ಯತೆ ಇದೆ. ಸಹಿಷ್ಣತೆ ಮತ್ತು ಸಹಬಾಳ್ವೆಯ ಸಂಸ್ಕಾರವನ್ನು ಪಾಲಿಸಿದರೆ ಸಮಾಜದಲ್ಲಿ ಅಶಾಂತಿ ಮತ್ತು ಅಪನಂಬಿಕೆಯ ವಾತಾವರಣ ಇಲ್ಲವಾಗುತ್ತದೆ ಎಂದರು.

ಹುಟ್ಟುವಾಗ ವಿಶ್ವ ಮಾನವರಾಗಿರುವ ಎಲ್ಲರೂ ಕೊನೆಯವರೆಗೂ ವಿಶ್ವ ಮಾನವರಾಗಿಯೇ ಉಳಿಯಬೇಕು.

ಸಯ್ಯದ್ ತಾಜುದ್ದೀನ್ ಖಾದ್ರಿ ಅವರು ತಮ್ಮ ತಂದೆಯಂತೆಯೇ, ಸೂಫಿ ಧರ್ಮದ ಆಶಯದಂತೆ ವಿಶ್ವ ಮಾನವರನ್ನು ಸೃಷ್ಟಿಸುವ ಮಹೋನ್ನತ ಕಾರ್ಯವನ್ನು ನಡೆಸುತ್ತಿದ್ದಾರೆ. ಪರಸ್ಪರ ಪ್ರೀತಿ , ವಿಶ್ವಾಸ ಮತ್ತು ಬಾಂದವ್ಯದ ವಾತಾವರಣ ಸೃಷ್ಟಿಸುತ್ತಿರುವ ಖಾದ್ರಿ ಮತ್ತು ಇಂತಹ ಸೂಫಿ ಸಂತರಿಗೆ ಕೋಟಿ, ಕೋಟಿ ನಮನ ಎಂದು ಮೆಚ್ಚುಗೆ ಸೂಚಿಸಿದರು.

ವೈಚಾರಿಕತೆ ಮತ್ತು ಪ್ರತಿಯೊಬ್ಬರನ್ನೂ ಮಾನವೀಯಗೊಳಿಸುವ ಶಿಕ್ಷಣ ಇಂದಿನ ಅಗತ್ಯ. 850 ವರ್ಷಗಳ ಹಿಂದೆಯೇ ಬಸವಾದಿ ಶರಣರು, “ಇವ ನಮ್ಮವ ಇವ ನಮ್ಮವ” ಎನ್ನುವ ಅತ್ಯುನ್ನತ ಮಾನವೀಯ ಮೌಲ್ಯವನ್ನು ಸಾರುತ್ತಾ, ಸರ್ವ ಜಾತಿ ಜನಾಂಗದವರು ಸಮನಾಗಿ ಅಕ್ಕ ಪಕ್ಕ ಕೂರುವ ಅನುಭವ ಮಂಟಪವನ್ನು ನಿರ್ಮಿಸಿದರು. ಈ ಎರಡು ದಿನಗಳ ಸಮಾವೇಷದಲ್ಲಿ ಸೂಫಿಗಳ ಆಶಯವನ್ನು ಇನ್ನಷ್ಟು ಹೆಚ್ಚು ಪ್ರಚಾರ ಮಾಡುವಂತಾಗಲಿ ಎಂದು ಆಶಿಸಿದರು.

ಅತ್ಯುನ್ನತ ಮಾನವೀಯ ಮೌಲ್ಯ ಸಾರಿದ ಸೂಫಿ ಸಂತ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಅಭಿವೃದ್ಧಿಗೆ ಅಗತ್ಯ ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಅಲ್ಹಜ್ ಸಯ್ಯದ್ ತಾಜುದ್ದೀನ್ ಖಾದ್ರಿ ಅಲ್ ಜಿಲಾನಿ, ಗುಲ್ಬರ್ಗಾ ಷರೀಫ್ ನ ಹಜರತ್ ಕ್ವಾಜಾ ಬಂದನವಾಜ್ ದರ್ಗಾದ ಖುಸ್ರೂ ಹುಸೇನ್ ಸಾಬ್ ಖಿಲಾಬಿ ಅವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಸಮಾವೇಷದ ಮುಖ್ಯ ಅತಿಥಿಗಳಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ‌ ಅಹಮದ್, ಶಾಸಕರಾದ ಪ್ರಸಾದ್ ಅಬ್ಬಯ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಸಹಮದ್ ಸೇರಿ ಹಲವಾರು ಶಾಸಕರು ಮತ್ತು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share

Related posts

ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ರೇಣುಕಾ ಸುಕುಮಾರ ಅತ್ಯುತ್ತಮ ಐಪಿಎಸ್ ಅಧಿಕಾರಿಗಳಲ್ಲಿ ಒಬ್ಬರು. ಹೆಚ್ಚಿನ ಮಾಹಿತಿ..

admin

ಖ್ಯಾತ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ.?

admin

ಹುಬ್ಬಳ್ಳಿ: ಅರ್ಬಾಜಖಾನ್, ಅಮೀಷಾ ಪಟೇಲ್ – ನ್ಯಾಷನಲ್ ಪ್ರೆಸ್ಟೀಜ್ ಅವಾಡ್ರ್ಸ್‍ನ್ನು ಸ್ವರ್ಣ ಸಮೂಹ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ವಿಎಸ್‍ವಿ ಪ್ರಸಾದ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

admin

Leave a Comment