August 3, 2026
Startv News | Hubli | Kannada News
ಕರ್ನಾಟಕ ಸುದ್ದಿ ರಾಜಕೀಯ ವಾಣಿಜ್ಯ ವಿಶೇಷ ವರದಿ ಸುದ್ದಿಗಳು ಸ್ಥಳೀಯ ಹುಬ್ಬಳ್ಳಿ-ಧಾರವಾಡ

(GST) ನೋಟಿಸ್‌ ಪಡೆದ ವರ್ತಕರಿಂದ 3 ವರ್ಷದ ತೆರಿಗೆ ಬಾಕಿ ವಸೂಲಾತಿ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ.! ಕಡ್ಡಾಯ ಜಿಎಸ್‌ಟಿ ನೋಂದಣಿ.! Complete Details.

40 ಲಕ್ಷ ರೂ. ವ್ಯವಹಾರ ನಡೆಸಿದ್ದಕ್ಕೆ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯ ವರ್ತಕರಿಗೆ ನೋಟಿಸ್‌ ಜಾರಿ ಮಾಡಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಸಿದ್ದರಾಮಯ್ಯ ಇಂದು ತೆರಿಗೆ ಇಲಾಖೆಯ ಅಧಿಕಾರಿಗಳು, ವರ್ತಕ ಸಂಘದ ಪ್ರತಿನಿಧಿಗಳ ಜೊತೆ ಸಭೆ.

ಸಭೆಯ ಬಳಿಕ ಮಾತನಾಡಿ, ನೋಟಿಸ್‌ ನೀಡಿದ ವರ್ತಕರಿಂದ ಬಾಕಿ ತೆರಿಗೆಯನ್ನು ವಸೂಲಿ ಮಾಡುವುದಿಲ್ಲ. ಆದರೆ ವರ್ತಕರು ನೋಂದಣಿ ಮಾಡಿಕೊಳ್ಳಬೇಕು. ಈಗ ಕೊಟ್ಟಿರುವ ನೋಟೀಸ್ ಮೇಲೆ ವಸೂಲಾತಿ, ಕ್ರಮ ಕೈಗೊಳ್ಳುವುದಿಲ್ಲ.

ಮೂರು ವರ್ಷಗಳ ಬಾಕಿ ವಸೂಲಾತಿಗೆ ನೋಟಿಸ್ ಕೊಟ್ಟಿದ್ರು, ಅದನ್ನ ಮುಂದುವರಿಸುವುದಿಲ್ಲ. ಕಡ್ಡಾಯ ಜಿಎಸ್‌ಟಿ ನೋಂದಣಿಗೆ ಒಪ್ಪಿದ್ದಾರೆ. ಜಿಎಸ್‌ಟಿ ಗೊಂದಲಕ್ಕೆ ಸಹಾಯವಾಣಿ ತೆರೆಯುತ್ತೇವೆ. ಜಿಎಸ್‌ಟಿ ಬಗ್ಗೆ ಜಾಗೃತಿ ಕಾರ್ಯಕ್ರಮಗಳು ಮಾಡಲು ತೀರ್ಮಾನ.

ಮುಖ್ಯಮಂತ್ರಿಗಳು ಹೇಳಿದ್ದೇನು?
ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೋಟಿಸ್‌ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ. ಜಿಎಸ್‌ಟಿ ನೋಟಿಸ್‌ ನೀಡುವುದು ತಪ್ಪಲ್ಲ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು.

ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.
ಯುಪಿಐ ಅಡಿ 40 ಲಕ್ಷ ರೂ. ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್‌ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು. ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದ್ದು, ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು.

ನೋಟಿಸ್ ನೀಡಲಾಗಿರುವ ಹಳೆಯ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಅದನ್ನು ಸರ್ಕಾರ ವಸೂಲು ಮಾಡುವುದಿಲ್ಲ. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ಟಿ ನೋಂದಣಿ ಮಾಡಬೇಕು. ಯುಪಿಐ ವಹಿವಾಟು ಕೈಬಿಟ್ಟರೆ ವಹಿವಾಟಿನ ಮೇಲೆ ಪರಿಣಾಮ ಬೀರಲಿದೆ. ರಾಜ್ಯದಲ್ಲಿ ಕೇವಲ 9 ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18ಸಾವಿರ ನೋಟಿಸ್‌ ಜಾರಿಗೊಳಿಸಲಾಗಿದೆ.

ವ್ಯಾಪಾರ ವಹಿವಾಟುಗಳನ್ನು ಕಾನೂನು ಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ.

ಜಿಎಸ್‌ಟಿ ತೆರಿಗೆಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಈ ತೆರಿಗೆ ಸಂಗ್ರಹದಲ್ಲಿ 50% ರಷ್ಟನ್ನು ರಾಜ್ಯಕ್ಕೆ ನೀಡಲಾಗುತ್ತದೆ. ದೇಶದಲ್ಲೇ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದೆ.

ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಪರಿಣಾಮಕಾರಿಯಾಗಿಸಬೇಕು. ವ್ಯಾಪಾರ ವಹಿವಾಟು ಬಂದ್‌ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ.

Share

Related posts

ಹುಬ್ಬಳ್ಳಿಯಲ್ಲಿ ಮತ್ತೆ ಒಂದೂ ಹೆಣ್ಣಿನ ರಕ್ತ! ಲೋಕಸಭಾ ಚುನಾವಣೆ ಮುಗಿದಿದೆ. ಈಗ ಪ್ರತಿಭಟನೆ ಮಾಡುವವರು ಯಾರು??

admin

ಹುಬ್ಬಳ್ಳಿ ಧಾರವಾಡ ಕಾಂಗ್ರೆಸ್ ಸೆಂಟ್ರಲ್ ಮುಖ್ಯ ಕಚೇರಿಯಲ್ಲಿ ದಿಗ್ವಿಜಯ ಸಿಂಗ್ ಅವರಿಂದ ಧ್ವಜಾರೋಹಣ.

admin

ಬಕ್ರೀದ್ ಹಬ್ಬದಂದು ಗೋ ಬಲಿದಾನ ನಿಷೇಧ ಮಾಡುತ್ತೇವೆ.! ರಾಷ್ಟ್ರೀಯ ಪಶೂ ಎಂದು ಘೋಷಿಸಿ. ದಬ್ಬಾಳಿಕೆ ಸಹಿಸುವುದಿಲ್ಲ.! ಶಫಕಥಲಿ ಬಡಿಗೇರ್ ಎಂಐಎಂ ಪ್ರಧಾನ ಕಾರ್ಯದರ್ಶಿ ಹುಬ್ಬಳ್ಳಿ.

admin

Leave a Comment