ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಅಕ್ಟೋಬರ್ 23, 2026ರಂದು ನಡೆಯಲಿದೆ. ಈ ಕ್ಷೇತ್ರದಲ್ಲಿ ಹುಬ್ಬಳ್ಳಿ–ಧಾರವಾಡ ಸೇರಿದಂತೆ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಸೇರಿವೆ.
ಕಾಂಗ್ರೆಸ್‌ನಿಂದ ಮಾಜಿ ವಿಧಾನ ಪರಿಷತ್ ಸದಸ್ಯ ಮೋಹನ್ ಲಿಂಬಿಕಾಯಿ ಸ್ಪರ್ಧಿಸುತ್ತಿದ್ದಾರೆ. ನಿರುದ್ಯೋಗ, ಸರ್ಕಾರಿ ಹುದ್ದೆಗಳ ನೇಮಕಾತಿ, ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳು ಪ್ರಚಾರದ ಪ್ರಮುಖ ವಿಷಯಗಳಾಗಿವೆ.
ಪದವೀಧರರು ಹೇಗೆ ಮತ ಚಲಾಯಿಸಬೇಕು?
- ಪದವಿ ಪಡೆದಿರುವುದರ ಜೊತೆಗೆ ಈ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿರಬೇಕು.
- ನಿಮ್ಮ ಮತಗಟ್ಟೆ ಮತ್ತು ಮತದಾರರ ಪಟ್ಟಿಯಲ್ಲಿನ ಹೆಸರನ್ನು ಮುಂಚಿತವಾಗಿ ಪರಿಶೀಲಿಸಿ.
- ಈ ಚುನಾವಣೆಯಲ್ಲಿ ಸಾಮಾನ್ಯ EVM ಬದಲಿಗೆ ಮತಪತ್ರ ಬಳಸಲಾಗುತ್ತದೆ.
- ಮತಪತ್ರದಲ್ಲಿ ಅಭ್ಯರ್ಥಿಗಳಿಗೆ ಆದ್ಯತೆಯ ಕ್ರಮದಲ್ಲಿ ಮತ ಸೂಚಿಸುವ ವಿಧಾನವನ್ನು ಚುನಾವಣಾಧಿಕಾರಿಗಳ ಸೂಚನೆಯಂತೆ ಅನುಸರಿಸಬೇಕು.
ವರದಿ: ಸುಭಾನ್ ಹುಬ್ಬಳ್ಳಿ.
